Proverbs 27:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.
Kannada BSI Bible 2016
ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೂ ನಿನ್ನ ತಂದೆಗೂ ವಿುತ್ರನಾದವನನ್ನು ಬಿಡಬೇಡ; ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು; ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.
Kannada Bible (KNCL) BSI 2016
ನಿನಗೂ ನಿನ್ನ ಹೆತ್ತವನಿಗೂ ಮಿತ್ರನಾದವನನ್ನು ಬಿಡಬೇಡ; ಇಕ್ಕಟ್ಟಿನ ದಿನದಲ್ಲಿ ಒಡಹುಟ್ಟಿದವರನ್ನು ಆಶ್ರಯಿಸಬೇಡ; ದೂರವಿರುವ ಅಣ್ಣನಿಗಿಂತ ಹತ್ತಿರವಿರುವ ನೆರೆಯವನೆ ಲೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.