Proverbs 27:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೊತ್ತಾರೆಯಲ್ಲಿ ನಿನ್ನ ನೆರೆಯವನಿಗೆ, “ನಮಸ್ಕಾರ!” ಎಂದು ಕೂಗಿ ಎಬ್ಬಿಸಬೇಡ. ಅವನಿಗೆ ಅದು ಆಶೀರ್ವಾದದಂತೆ ಕಾಣದೆ ಶಾಪದಂತೆಯೇ ಕಾಣುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು, ಶಪಿಸುವವನೆನಿಸಿಕೊಳ್ಳುವನು.
Kannada BSI Bible 2016
ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು ಶಪಿಸುವವನೆನಿಸಿಕೊಳ್ಳುವನು.
Kannada Bible (KNCL) BSI 2016
ಮುಂಜಾನೆಯೆ ಅಬ್ಬರದಿಂದ ನೆರೆಯವನನ್ನು ಎಬ್ಬಿಸಿ ಮಾಡುವ ಆಶೀರ್ವಾದ, ಶಾಪವೆಂದೇ ಪರಿಗಣಿಸಲ್ಪಡುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ, ಅದು ಶಾಪವೆಂದು ಪರಿಗಣಿಸಲಾಗುವುದು.