Proverbs 27:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ; ಬೇಕಿದ್ದರೆ ಬೇರೆಯವರೇ ನಿನ್ನನ್ನು ಹೊಗಳಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ, ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.
Kannada BSI Bible 2016
ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ; ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.
Kannada Bible (KNCL) BSI 2016
ನಿನ್ನ ಬಾಯಿ ಅಲ್ಲ, ಬೇರೆಯವರು ಹೊಗಳಲಿ ನಿನ್ನ; ಆತ್ಮಸ್ತುತಿ ಸಲ್ಲ, ಅನ್ಯರು ಸ್ತುತಿಸಲಿ ನಿನ್ನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಬಾಯಿ ಅಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.