Proverbs 27:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹುಲ್ಲನ್ನು ಕತ್ತರಿಸಿದ ಮೇಲೆ ಹೊಸಹುಲ್ಲು ಬೆಳೆಯಲಾರಂಭಿಸುವುದು; ಒಣಹುಲ್ಲನ್ನು ಬೆಟ್ಟಗಳ ಮೇಲೆ ಸಂಗ್ರಹಿಸಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಲ್ಲನ್ನು ಕೊಯ್ದು ಹೊತ್ತುಕೊಂಡು ಬಂದ ಮೇಲೆ ಹಸಿಹುಲ್ಲು ತಲೆದೋರುವುದು, ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು.
Kannada BSI Bible 2016
ಹುಲ್ಲು ಕಾಣುತ್ತದೆ; ಹಸಿ ಹುಲ್ಲು ತನ್ನನ್ನೇ ತೋರುತ್ತದೆ, ಬೆಟ್ಟಗಳ ಸೊಪ್ಪು ಕೂಡಿಸಲ್ಪಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಲ್ಲನ್ನು [ಕೊಯ್ದು] ಹೊತ್ತುಕೊಂಡು ಬಂದ ಮೇಲೆ ಹಸಿಹುಲ್ಲು ತಲೆದೋರುವದು; ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು.
Kannada Bible (KNCL) BSI 2016
ಹುಲ್ಲು ಕೊಯ್ದು ತಂದಮೇಲೆ, ಗುಡ್ಡದ ಸೊಪ್ಪು ಕೂಡಿಸಿಟ್ಟ ಮೇಲೆ, ಹಸಿ ಹುಲ್ಲು ಚಿಗುರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಣಹುಲ್ಲನ್ನು ಕೊಯ್ದು ನಂತರ ಹೊಸ ಬೆಳೆ ಕಾಣಿಸಿಕೊಂಡಾಗ ಮತ್ತು ಬೆಟ್ಟಗಳಿಂದ ಹುಲ್ಲು ಸಂಗ್ರಹಿಸಿದಾಗ,