Proverbs 28:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಐಶ್ವರ್ಯವಂತನು ತಾನೇ ಬುದ್ಧಿವಂತನೆಂದು ಭಾವಿಸುತ್ತಾನೆ. ವಿವೇಕಿಯಾದ ಬಡವನಾದರೊ ಸತ್ಯವನ್ನು ಕಾಣಬಲ್ಲನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.
Kannada BSI Bible 2016
ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.
Kannada Bible (KNCL) BSI 2016
ಹಣವಂತ ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವನು; ವಿವೇಕಿಯಾದ ಬಡವ ಅವನೆಂಥವನೆಂದು ಅರ್ಥಮಾಡಿಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐಶ್ವರ್ಯವಂತನು ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾಗಿದ್ದಾನೆ. ಆದರೆ ವಿವೇಚನೆಯುಳ್ಳ ಬಡವನು ಅವನ ವಂಚನೆಯನ್ನು ನೋಡಬಲ್ಲನು.