Proverbs 28:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವಿವೇಕವಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು.
Kannada BSI Bible 2016
ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿವೇಕಶೂನ್ಯನಾದ ಒಡೆಯನು ಮಹಾಹಿಂಸಕನು; ದೋಚಿಕೊಳ್ಳಲೊಲ್ಲದವನು ದೀರ್ಘಾಯುಷ್ಯನು.
Kannada Bible (KNCL) BSI 2016
ವಿವೇಕಶೂನ್ಯನಾದ ಒಡೆಯ ಮಹಾಹಿಂಸಕ; ದುರ್ಲಾಭವನ್ನು ವಿರೋಧಿಸುವವನಿಗೆ ದೀರ್ಘಾಯುಷ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗ್ರಹಿಕೆಯಿಲ್ಲದ ಅಧಿಕಾರಿಯು ಮಹಾ ಸುಲಿಗೆಗಾರನು. ಆದರೆ ಲೋಭವನ್ನು ಹಗೆಮಾಡುವವನು ದೀರ್ಘಾಯುಷ್ಯನು.