Proverbs 28:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇಶದಲ್ಲಿ ದಂಗೆಯೇಳುತ್ತಲೇ ಇದ್ದರೆ ಅಧಿಪತಿಗಳು ಬದಲಾಗುತ್ತಲೇ ಇರುವರು. ಜ್ಞಾನಿಯೂ ಅನುಭವಸ್ಥನೂ ಆಗಿರುವ ಅಧಿಪತಿಯ ದೇಶ ಸ್ಥಿರವಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.
Kannada BSI Bible 2016
ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶವು ಅಧರ್ಮದಿಂದ ಬಹುನಾಯಕವಾಗುವದು; ಜ್ಞಾನಿಗಳೂ ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗುವದು.
Kannada Bible (KNCL) BSI 2016
ಅರಾಜಕತೆಯಿಂದ ನಾಡಿನಲ್ಲಿ ನಾಯಕರನೇಕರು ತಲೆಯೆತ್ತುವರು; ಜ್ಞಾನ ಹಾಗೂ ವಿವೇಕದಿಂದ ನಾಡು ಸುಸ್ಥಿರವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ. ಆದರೆ ಒಳನೋಟ ಹಾಗು ತಿಳುವಳಿಕೆಯ ನಾಯಕನಿಂದಲೇ ದೇಶವು ಸುಸ್ಥಿರವಾಗುವುದು.