Proverbs 28:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದು ಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.
Kannada BSI Bible 2016
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡ್ಡಿಬಾಚಿಗಳಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವದು.
Kannada Bible (KNCL) BSI 2016
ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.