Proverbs 29:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರವಾದಿಗಳಿಗೆ ದರ್ಶನವಾಗದಿದ್ದರೆ ಜನರು ಹತೋಟಿ ತಪ್ಪುತ್ತಾರೆ. ಆದರೆ ದೇವರ ಕಟ್ಟಳೆಗೆ ವಿಧೇಯನಾಗಿರುವವನು ಸಂತೋಷವಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.
Kannada BSI Bible 2016
ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದರ್ಶಕರಿಲ್ಲದಿರುವಲ್ಲಿ ಜನರು ಅಂಕೆಮೀರುವರು; ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.
Kannada Bible (KNCL) BSI 2016
ಪ್ರವಾದನೆಗಳಿಲ್ಲದಿರುವಾಗ ಪ್ರಜೆಗಳು ಅಂಕೆಮೀರಿ ನಡೆಯುತ್ತಾರೆ, ಧರ್ಮಶಾಸ್ತ್ರಾನುಸಾರ ನಡೆಯುವವನು ಭಾಗ್ಯವಂತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ; ಆದರೆ ಜ್ಞಾನೋಪದೇಶವನ್ನು ಕೈಗೊಳ್ಳುವವನು ಧನ್ಯನು.