Proverbs 29:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಸೇವಕನಿಗೆ ಕೇವಲ ಮಾತಿನಿಂದ ಹೇಳಿದರೆ ಅವನು ಪಾಠವನ್ನು ಕಲಿತುಕೊಳ್ಳುವುದಿಲ್ಲ. ಅವನು ನಿನ್ನ ಮಾತುಗಳನ್ನು ಅರ್ಥಮಾಡಿಕೊಂಡರೂ ವಿಧೇಯನಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು, ಅವನು ತಿಳಿದುಕೊಂಡರೂ ಗಮನಿಸನು.
Kannada BSI Bible 2016
ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು; ಅವನು ತಿಳಿದುಕೊಂಡರೂ ಗಮನಿಸನು.
Kannada Bible (KNCL) BSI 2016
ಮಾತಿನಿಂದ ಮಾತ್ರ ಸೇವಕನನ್ನು ತಿದ್ದಲಾಗದು; ಮಾತು ಕಿವಿಗೆ ಬಿದ್ದರೂ ಅದನ್ನು ಗ್ರಹಿಸಲಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾತಿನಿಂದ ಮಾತ್ರ ಕೆಲಸಗಾರರನ್ನು ತಿದ್ದಲು ಸಾಧ್ಯವಿಲ್ಲ; ಏಕೆಂದರೆ ಅವರು ಅರ್ಥಮಾಡಿಕೊಂಡರೂ, ಅದರಂತೆ ನಡೆಯುವುದಿಲ್ಲ.