Proverbs 29:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವಿವೇಚಿಸದೆ ಮಾತಾಡುವವನನ್ನು ನೀನು ಕಂಡಿರುವಿಯೋ? ಅವನಿಗಿಂತಲೂ ಮೂಢನಿಗೇ ಹೆಚ್ಚು ನಿರೀಕ್ಷೆಯಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಡುಕಿ ಮಾತನಾಡುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನು ಇಡಬಹುದು.
Kannada BSI Bible 2016
ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಡುಕಿ ಮಾತಾಡುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.
Kannada Bible (KNCL) BSI 2016
ದುಡುಕಿ ಮಾತಾಡುವವನನ್ನು ನೋಡು; ಅಂಥವನಿಗಿಂತಲು ಮೂಢನ ಸುಧಾರಣೆ ಹೆಚ್ಚು ಸಾಧ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಡುಕಿ ಮಾತನಾಡುವ ವ್ಯಕ್ತಿಯನ್ನು ನೀನು ನೋಡಿದ್ದೀಯೋ? ಅಂಥವನಿಗಿಂತಲೂ ಬುದ್ಧಿಹೀನನ ವಿಷಯದಲ್ಲಿ ಹೆಚ್ಚು ನಿರೀಕ್ಷೆ ಇದೆ.