Proverbs 29:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನು ನ್ಯಾಯವಂತನಾಗಿದ್ದರೆ ದೇಶವು ಬಲಿಷ್ಠವಾಗಿರುವುದು. ರಾಜನು ತನ್ನ ಐಶ್ವರ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ವಿಪರೀತ ತೆರಿಗೆಗಳನ್ನು ಹಾಕಿದರೆ, ದೇಶವು ಹಾಳಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.
Kannada BSI Bible 2016
ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು; ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.
Kannada Bible (KNCL) BSI 2016
ನ್ಯಾಯಪಾಲಕ ರಾಜನಿಂದ ನಾಡಿನ ಅಭಿವೃದ್ಧಿ; ಲಂಚಕೋರ ಅರಸನಿಂದ ದೇಶ ಹಿಡಿವುದು ವಿನಾಶದ ಹಾದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನ್ಯಾಯದಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ, ಆದರೆ ಲಂಚಕೋರ ಅಧಿಕಾರಿ ದೇಶವನ್ನು ಕೆಡವಿ ಹಾಕುತ್ತಾನೆ.