Proverbs 30:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.
Kannada BSI Bible 2016
ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂವಿುಯೊಳಗಿಂದ ಬಡವರನ್ನೂ ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ ಅಗಿದು ನುಂಗಿಬಿಡುವ ಮತ್ತೊಂದು ತರದವರುಂಟು.
Kannada Bible (KNCL) BSI 2016
ಖಡ್ಗದಂಥ ಹಲ್ಲುಗಳು, ಕತ್ತಿಯಂಥ ಕೋರೆಗಳೂ ಉಳ್ಳವರಿದ್ದಾರೆ. ನಾಡಿನ ಬಡವರನ್ನು ಇವರು ತಿಂದುಬಿಡುವರು; ಜನರಲ್ಲಿ ದಿಕ್ಕಿಲ್ಲದವರನ್ನು ಇವರು ನುಂಗಿಬಿಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಖಡ್ಗಗಳಂತೆ ಹಲ್ಲುಗಳುಳ್ಳವರೂ ಚೂರಿಗಳಂತೆ ದವಡೆಗಳುಳ್ಳವರೂ ಬಡವರನ್ನು ಭೂಮಿಯಿಂದಲೂ ದಿಕ್ಕಿಲ್ಲದವರನ್ನು ಮಾನವಕುಲದಿಂದಲೂ ಕಬಳಿಸುವವರೂ ಆಗಿದ್ದಾರೆ.