Proverbs 30:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
Kannada BSI Bible 2016
ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನಿಂದ ಕಪಟವನ್ನೂ ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
Kannada Bible (KNCL) BSI 2016
ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಂಚನೆ ಸುಳ್ಳನ್ನು ನನ್ನಿಂದ ದೂರಮಾಡಿರಿ. ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ನನಗೆ ಕೊಡಬೇಡಿರಿ. ನನಗೆ ಅನುದಿನದ ಆಹಾರವನ್ನು ದಯಪಾಲಿಸಿರಿ.