Proverbs 31:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನೂ ಕತ್ತಲಿರುವಾಗಲೇ ಆಕೆ ಎದ್ದೇಳುವಳು. ಆಕೆ ತನ್ನ ಕುಟುಂಬದವರಿಗೂ ತನ್ನ ಸೇವಕಿಯರಿಗೂ ಊಟ ಕೊಡುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೂ ಕತ್ತಲಿರುವಾಗಲೇ ಎದ್ದು, ಮನೆಯವರಿಗೆ ಆಹಾರವನ್ನು, ನೀಡುವಳು ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.
Kannada BSI Bible 2016
ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೂ ಕತ್ತಲಿರುವಾಗಲೇ ಎದ್ದು ಮನೆಯವರಿಗೆ ತೀನಿಯನ್ನಿಕ್ಕಿ ತೊತ್ತುಗಳಿಗೆ ದಿನದ ಬತ್ಯವನ್ನು ಹಂಚುವಳು.
Kannada Bible (KNCL) BSI 2016
ಇನ್ನೂ ಕತ್ತಲಿರುವಾಗಲೆ ಎದ್ದುಬಿಡುತ್ತಾಳೆ, ಮನೆಯವರಿಗೆ ತಿಂಡಿತೀರ್ಥ ಅಣಿಮಾಡುತ್ತಾಳೆ, ಕೆಲಸಗಿತ್ತಿಯರಿಗೆ ದಿನಗೆಲಸಗಳನ್ನು ನೇಮಿಸುತ್ತಾಳೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೂ ಕತ್ತಲಿರುವಾಗಲೇ ಆಕೆಯು ಏಳುವಳು; ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು, ತನ್ನ ದಾಸಿಯರಿಗೆ ದಿನದ ಕೆಲಸವನ್ನು ಹಂಚುವಳು.