Proverbs 31:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕೆ ತುಂಬ ಕಷ್ಟಪಟ್ಟು ಕೆಲಸಮಾಡುವಳು. ಆಕೆ ಬಲವಾಗಿದ್ದಾಳೆ; ತನ್ನ ಕೆಲಸಗಳನ್ನೆಲ್ಲಾ ಮಾಡಲು ಶಕ್ತಳಾಗಿದ್ದಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು.
Kannada BSI Bible 2016
ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಡುವಿಗೆ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು ತೋಳುಗಳನ್ನು ಶಕ್ತಿಗೊಳಿಸುವಳು.
Kannada Bible (KNCL) BSI 2016
ನಡುಕಟ್ಟಿ ಕೆಲಸಕ್ಕೆ ನಿಲ್ಲುತ್ತಾಳೆ, ದುಡಿಮೆಯಲ್ಲಿ ತೋಳ್ಬಲವನ್ನು ತೋರ್ಪಡಿಸುತ್ತಾಳೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ನಡುಕಟ್ಟಿ ಆಸಕ್ತಿಯಿಂದ ಕೆಲಸ ಮಾಡುತ್ತಾಳೆ. ತನ್ನ ಶಕ್ತಿಯುತ ತೋಳುಗಳಿಂದ ಕೆಲಸ ಮಾಡುತ್ತಾಳೆ.