Proverbs 31:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲಾವಣ್ಯ ನಿನ್ನನ್ನು ಮೋಸಗೊಳಿಸಬಲ್ಲದು; ಸೌಂದರ್ಯ ತಾತ್ಕಾಲಿಕವಾದದ್ದು. ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳ ಹೆಂಗಸೇ, ಹೊಗಳಿಕೆಗೆ ಪಾತ್ರಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.
Kannada BSI Bible 2016
ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ; ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.
Kannada Bible (KNCL) BSI 2016
ಆಕರ್ಷಣೆ ನೆಚ್ಚತಕ್ಕದಲ್ಲ. ಅಲಂಕಾರ ನೆಲೆಯಾದುದಲ್ಲ; ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವಳೆ ಸ್ತುತ್ಯಾರ್ಹಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ. ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.