Proverbs 4:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಉಪದೇಶಗಳನ್ನು ಯಾವಾಗಲೂ ನೆನಪುಮಾಡಿಕೊ; ಮರೆತುಬಿಡಬೇಡ. ಅವು ನಿನಗೆ ಜೀವವಾಗಿವೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.
Kannada BSI Bible 2016
ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸದುಪದೇಶವನ್ನು ಹಿಡಿ, ಸಡಿಲಬಿಡಬೇಡ; ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.
Kannada Bible (KNCL) BSI 2016
ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.