Proverbs 4:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜ್ಞಾನವನ್ನು ಮತ್ತು ವಿವೇಕವನ್ನು ಪಡೆದುಕೋ! ನನ್ನ ಮಾತುಗಳನ್ನು ಮರೆಯಬೇಡ. ಯಾವಾಗಲೂ ನನ್ನ ಉಪದೇಶಗಳನ್ನು ಅನುಸರಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ.
Kannada BSI Bible 2016
ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಓರೆಯಾಗಬೇಡ.
Kannada Bible (KNCL) BSI 2016
ಮರೆಯಬೇಡ, ನನ್ನ ಮಾತಿಗೆ ಓರೆಯಾಗಬೇಡ, ಜ್ಞಾನವನ್ನು ಪಡೆ. ವಿವೇಕವನ್ನು ಗಳಿಸಿಕೊ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನವನ್ನು ಪಡೆ, ತಿಳುವಳಿಕೆಯನ್ನು ಸಂಪಾದಿಸು; ನನ್ನ ಮಾತುಗಳನ್ನು ಮರೆಯದಿರು, ಅವುಗಳಿಂದ ದೂರವಾಗಬೇಡ.