Proverbs 4:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜ್ಞಾನವನ್ನು ಪ್ರೀತಿಸು, ಆಗ ಅದು ನಿನ್ನನ್ನು ಉನ್ನತಸ್ಥಾನಕ್ಕೆ ತರುವುದು. ಜ್ಞಾನವನ್ನು ಅಪ್ಪಿಕೊ; ಆಗ ಅದು ನಿನಗೆ ಸನ್ಮಾನವನ್ನು ತರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.
Kannada BSI Bible 2016
ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು; ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.
Kannada Bible (KNCL) BSI 2016
ಜ್ಞಾನವೆಂಬಾಕೆಯನ್ನು ಶ್ರೇಷ್ಠಳೆಂದು ಭಾವಿಸಿದೆಯಾದರೆ, ಆಕೆ ನಿನ್ನನ್ನು ಸನ್ಮಾನಿಸುವಳು. ನೀನು ಅವಳನ್ನು ಅಪ್ಪಿಕೊಂಡೆಯಾದರೆ, ಆಕೆ ನಿನ್ನನ್ನು ಘನಪಡಿಸುವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನವನ್ನು ನೀನು ಅಮೂಲ್ಯವೆಂದು ಎಣಿಸು, ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿಕೊ, ಆಕೆಯು ನಿನ್ನನ್ನು ಘನಪಡಿಸುವಳು.