Proverbs 6:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಹೋಗುವಲ್ಲೆಲ್ಲಾ ಅವರ ಉಪದೇಶಗಳು ನಿನ್ನನ್ನು ನಡೆಸುತ್ತವೆ. ನೀನು ಮಲಗಿರುವಾಗಲೂ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಡನೆ ಮಾತಾಡಿ ನಿನಗೆ ಮಾರ್ಗದರ್ಶನ ನೀಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.
Kannada BSI Bible 2016
ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ನಡಿಸುವದು, ಮಲಗಿಕೊಂಡಾಗ ಕಾಯುವದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
Kannada Bible (KNCL) BSI 2016
ನಡೆಯುವಾಗ ಅವು ನಿನಗೆ ಮುಂದಾಳಾಗಿರುವುವು, ಮಲಗುವಾಗ ಅವು ನಿನ್ನನ್ನು ಕಾಯುವುವು, ಎಚ್ಚರಗೊಂಡಾಗ ಅವು ನಿನ್ನೊಡನೆ ಸಂವಾದಿಸುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಡೆಯುವಾಗ ಅವು ನಿನಗೆ ಮಾರ್ಗದರ್ಶಿಯಾಗಿರುತ್ತವೆ. ನೀನು ಮಲಗುವಾಗ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಂದಿಗೆ ಮಾತಾಡುತ್ತವೆ.