Proverbs 6:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಅವನ ಅಧಿಕಾರದ ಅಧೀನದಲ್ಲಿರುವೆ. ಆದ್ದರಿಂದ ಅವನ ಬಳಿಗೆ ಹೋಗಿ ನಿನ್ನನ್ನು ಸಾಲದಿಂದ ಬಿಡುಗಡೆ ಮಾಡುವಂತೆ ಬೇಡಿಕೋ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು, ನಡೆ, ತ್ವರೆಪಡು, ಆ ನೆರೆಯವನನ್ನು ಅಂಗಲಾಚಿ ಬೇಡಿಕೋ,
Kannada BSI Bible 2016
ನನ್ನ ಮಗನೇ, ನಿನ್ನ ಸ್ನೇಹಿತನ ಕೈಗೆ ಸಿಕ್ಕಿದಾಗ ತಪ್ಪಿಸಿಕೊಳ್ಳಲು ಇದನ್ನು ಮಾಡು. ಹೋಗಿ ನಿನ್ನನ್ನು ನೀನು ತಗ್ಗಿಸಿಕೊಂಡು ನಿನ್ನ ಸ್ನೇಹಿತನಿಗೆ ಹೊಣೆಯಾಗು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು; ನಡೆ, ತ್ವರೆಪಡು, ಆ ನೆರೆಯವನನ್ನು ಕಾಡು;
Kannada Bible (KNCL) BSI 2016
ಮಗನೇ, ನೀನು ನೆರೆಯವನ ಕೈವಶವಾಗಿರುವೆ; ಈ ಪರಿಮಾಡು ತಪ್ಪಿಸಿಕೊಳ್ಳಬೇಕಾದರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಗನೇ, ನೀನು ನಿನ್ನ ನೆರೆಯವನ ಕೈಗೆ ಸಿಕ್ಕಿಕೊಂಡದರಿಂದ, ನಿನ್ನನ್ನು ನೀನು ತಪ್ಪಿಸಿಕೊಳ್ಳಲು ಇದನ್ನು ಮಾಡು: ಹೋಗಿ ನಿನ್ನನ್ನು ನೀನು ತಗ್ಗಿಸಿಕೋ, ನಿನ್ನ ನೆರೆಯವನಿಗೆ ವಿಶ್ರಾಂತಿಯನ್ನು ಕೊಡಬೇಡ.