Proverbs 6:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸುಗ್ಗಿಕಾಲದಲ್ಲಿ ತನಗೆ ಬೇಕಾದ ಆಹಾರವನ್ನೆಲ್ಲ ಅದು ಕೂಡಿಸಿಟ್ಟುಕೊಳ್ಳುವುದು. ಆದ್ದರಿಂದ ಚಳಿಗಾಲದಲ್ಲಿ ಅದಕ್ಕೆ ಬೇಕಾದಷ್ಟು ಆಹಾರ ಇರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು.
Kannada BSI Bible 2016
ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಗ್ಗಿಯಲ್ಲಿ ತನ್ನ ತೀನಿಯನ್ನು ಕೂಡಿಸಿಡುವದು, ಕೊಯ್ಲಿನ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವದು.
Kannada Bible (KNCL) BSI 2016
ಆದರೂ ಕೂಡಿಸುತ್ತದೆ ತಿಂಡಿ ಬೇಸಿಗೆಯಲ್ಲಿ, ಸಂಗ್ರಹಿಸುತ್ತದೆ ಧಾನ್ಯ ಸುಗ್ಗಿಯಲ್ಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇಸಿಗೆಯಲ್ಲಿ ಅದು ತನ್ನ ಆಹಾರವನ್ನು ಸಂಗ್ರಹಿಸುತ್ತದೆ. ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿಕೊಳ್ಳುತ್ತದೆ.