Proverbs 7:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವಳು ಆ ಯೌವನಸ್ಥನನ್ನು ಪ್ರೇರೇಪಿಸಲು ಈ ಮಾತುಗಳನ್ನಾಡಿದಳು. ಆಕೆಯ ಸವಿನುಡಿಗಳು ಅವನನ್ನು ಮರುಳುಗೊಳಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ, ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ.
Kannada BSI Bible 2016
ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ತನ್ನ ಸವಿಮಾತುಗಳಿಂದ ಬಲಾತ್ಕರಿಸಿ ಬಹಳವಾಗಿ ಪ್ರೇರಿಸಿ ಸಮ್ಮತಿಪಡಿಸುತ್ತಾಳೆ.
Kannada Bible (KNCL) BSI 2016
ಹೀಗೆ ಮೋಹಕ ಮಾತುಗಳಿಂದ ಒತ್ತಾಯಪಡಿಸುತ್ತಾಳೆ, ಅತಿಯಾದ ಒಲುಮೆಯಿಂದ ಪುಸಲಾಯಿಸುತ್ತಾಳೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನವೊಲಿಸುವ ಮಾತುಗಳಿಂದ ಅವಳು ಅವನನ್ನು ದಾರಿ ತಪ್ಪಿಸಿ, ಅವಳು ತನ್ನ ಮೋಹಕ ಮಾತುಗಳಿಂದ ಅವನನ್ನು ಆಕರ್ಷಿಸುತ್ತಾಳೆ.