Proverbs 8:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
Kannada BSI Bible 2016
ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
Kannada Bible (KNCL) BSI 2016
ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.