Proverbs 8:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನಗೆ ಕಿವಿಗೊಡುವವನು ಧನ್ಯನಾಗಿದ್ದಾನೆ. ಅವನು ಪ್ರತಿದಿನ ನನ್ನ ಮನೆಬಾಗಿಲುಗಳ ಬಳಿಯಲ್ಲೂ ನನ್ನ ಬಾಗಿಲಿನ ನಿಲುವುಗಳ ಬಳಿಯಲ್ಲೂ ಕಾದುಕೊಂಡಿರುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.
Kannada BSI Bible 2016
ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಲಿನ ನಿಲವುಗಳ ಹತ್ತಿರ ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.
Kannada Bible (KNCL) BSI 2016
ನನ್ನ ಬಾಗಿಲಬಳಿ ಪ್ರತಿದಿನ ಕಾಯುತ್ತಾ ನನ್ನ ಹೊಸಲಿನತ್ತ ನಿರೀಕ್ಷಿಸಿ ನೋಡುತ್ತಾ ನನ್ನ ಮಾತನ್ನು ಆಲಿಸುವವನು ಭಾಗ್ಯವಂತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ, ನನ್ನ ಬಾಗಿಲುಗಳ ನಿಲುವುಗಳಲ್ಲಿ ನಿರೀಕ್ಷಿಸುತ್ತಾ, ನನ್ನ ಮಾತುಗಳನ್ನು ಕೇಳುವವರು ಧನ್ಯರು.