Proverbs 9:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ಮೂಢರಿಗೆ, ಅವಳ ಮನೆ ಕೇವಲ ದೆವ್ವಗಳಿಂದ ತುಂಬಿರುವುದಾಗಲಿ ಆಕೆಯ ಅತಿಥಿಗಳು ಅಗಾಧವಾದ ಪಾತಾಳದಲ್ಲಿ ಬಿದ್ದಿರುವುದಾಗಲಿ ತಿಳಿದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.
Kannada BSI Bible 2016
ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನೆಯು ಪ್ರೇತನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.
Kannada Bible (KNCL) BSI 2016
ಅವನಿಗೆ ತಿಳಿಯದು ಅವಳ ಮನೆ ಪ್ರೇತನಿವಾಸವೆಂದು, ಅವಳ ಅತಿಥಿಗಳು ಬಿದ್ದಿರುವುದು ಅಗಾಧ ಪಾತಾಳದಲ್ಲೆಂದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಮನೆ ಸತ್ತವರ ಸ್ಥಾನವಾಗಿದೆ. ಅವಳ ಅತಿಥಿಗಳು ಪಾತಾಳದ ಅಗಾಧದಲ್ಲಿ ಬಿದ್ದಿದ್ದಾರೆಂದು ಅವನಿಗೆ ತಿಳಿಯದು.