Proverbs 9:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಅಹಂಕಾರಿಗೆ ಅವನ ತಪ್ಪನ್ನು ತಿಳಿಸಲು ಪ್ರಯತ್ನಿಸಿದರೆ ಅವನು ನಿನ್ನನ್ನೇ ಖಂಡಿಸುವನು. ನೀನು ಕೆಡುಕನಿಗೆ ಅವನ ತಪ್ಪನ್ನು ತಿಳಿಸಿದರೆ ಅವನು ನಿನ್ನನ್ನೇ ಗೇಲಿಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.
Kannada BSI Bible 2016
ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೆ ಕಳಂಕವಾಗುವದು.
Kannada Bible (KNCL) BSI 2016
ಕುಚೋದ್ಯಗಾರರನ್ನು ಶಿಕ್ಷಿಸುವವನು ತನ್ನನ್ನೆ ಅಪಮಾನಕ್ಕೆ ಗುರಿಮಾಡಿಕೊಳ್ಳುತ್ತಾನೆ. ದುಷ್ಟನನ್ನು ಗದರಿಸುವವನು ತನಗೇ ಕಳಂಕ ತಂದುಕೊಳ್ಳುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಿಹಾಸ್ಯ ಮಾಡುವವನನ್ನು ಗದರಿಸುವವನು ತನ್ನನ್ನು ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.