Psalms 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನ್ಯಾಯತೀರ್ಪಿನ ಕಾಲ ಬಂದಾಗ ದುಷ್ಟರಿಗೆ ಅಪರಾಧಿಗಳೆಂದು ತೀರ್ಪಾಗುವುದು. ಪಾಪಿಗಳಿಗೆ ನೀತಿವಂತರ ಮಧ್ಯದಲ್ಲಿ ಸ್ಥಳವಿರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ.
Kannada BSI Bible 2016
ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲೂ ಪಾಪಾತ್ಮರು ನೀತಿವಂತರ ಸಭೆಯಲ್ಲೂ ನಿಲ್ಲುವದಿಲ್ಲ.
Kannada Bible (KNCL) BSI 2016
ಎಂದೇ ನಿಲ್ಲಲಾರರು ದುರುಳರು ನ್ಯಾಯಸ್ಥಾನದಲಿ I ಸದಸ್ಯರಾಗರು ಪಾಪಿಗಳು ಸಜ್ಜನರ ಸಂಘದಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ದುಷ್ಟರು ನ್ಯಾಯತೀರ್ಪಿಗೆ ಒಳಗಾಗುವರು, ಪಾಪಿಗಳಿಗೆ ನೀತಿವಂತರ ಸಭೆಯಲ್ಲಿ ಸ್ಥಳವಿರುವುದಿಲ್ಲ.