Psalms 10:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ, ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿಬೀಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.
Kannada BSI Bible 2016
ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟರು ಗರ್ವಿಷ್ಠರಾಗಿ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿಬೀಳಲಿ.
Kannada Bible (KNCL) BSI 2016
ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.