Psalms 10:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.
Kannada BSI Bible 2016
ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟನು ತನ್ನ ಮನೋರಥವು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಪರರ ಸೊತ್ತನ್ನು ಅಪಹರಿಸಿದವನು ಯೆಹೋವನನ್ನು ಅಲ್ಲಗಳೆದು ಬಿಟ್ಟುಬಿಡುತ್ತಾನೆ.
Kannada Bible (KNCL) BSI 2016
ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟನು ತನ್ನ ಹೃದಯಭಿಲಾಷೆಯಲ್ಲಿ ಕೊಚ್ಚಿಕೊಳ್ಳುತ್ತಾನೆ; ಅವನು ದುರಾಶೆಯುಳ್ಳವರನ್ನು ಆಶೀರ್ವದಿಸುವವನೂ ಯೆಹೋವ ದೇವರನ್ನು ಶಪಿಸುವವನೂ ಆಗಿದ್ದಾನೆ.