Psalms 10:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದುಷ್ಟರು ಗರ್ವದಿಂದ ದೇವರನ್ನು ತೊರೆದುಬಿಡುವರು; ದುಷ್ಟಾಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.
Kannada BSI Bible 2016
ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ವಿಚಾರಿಸುವದಿಲ್ಲ ಎಂದು ದುಷ್ಟನು ಸೊಕ್ಕಿನ ಮುಖದಿಂದ ಹೇಳಿಕೊಂಡು ದೇವರಿಲ್ಲವೆಂಬದಾಗಿ ಸದಾ ಯೋಚಿಸುತ್ತಾನೆ.
Kannada Bible (KNCL) BSI 2016
ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ: “ದೇವರೇ ಇಲ್ಲ\! II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.