Psalms 10:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.
Kannada BSI Bible 2016
ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವದರಿಂದ ಅವನ ಗ್ರಹಿಕೆಗೆ ಬರುವದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರ ಮಾಡುತ್ತಾನೆ.
Kannada Bible (KNCL) BSI 2016
ಗೆಲುವೆ ಅವನ ವ್ಯವಹಾರವೆಲ್ಲದರ ಸಾರ I ನಿನ್ನ ನಿರ್ಣಯ ಅವನ ಗ್ರಹಿಕೆಗೆ ಅತಿ ದೂರ II ಶತ್ರುಗಳನು ಕಂಡರೆ ಅವನಿಗೆ ತಾತ್ಸಾರ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಮಾರ್ಗಗಳು ಯಾವಾಗಲೂ ಸಮೃದ್ಧಿಯಾಗಿರುತ್ತವೆ; ಆದರೆ ನಿಮ್ಮ ನಿಯಮಗಳು ಅವನ ದೃಷ್ಟಿಗೆ ಬಹು ದೂರವಾಗಿವೆ; ಅವನು ತನ್ನ ಎಲ್ಲಾ ವೈರಿಗಳನ್ನು ಹೀಯಾಳಿಸುತ್ತಾನೆ.