Psalms 101:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. ನೀನು ನನ್ನ ಬಳಿಗೆ ಬರುವುದು ಯಾವಾಗ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.
Kannada BSI Bible 2016
ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥಹೃದಯದಿಂದಲೇ ಪ್ರವರ್ತಿಸುವೆನು.
Kannada Bible (KNCL) BSI 2016
ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೋಷರಹಿತ ಮಾರ್ಗದಲ್ಲಿ ನಡೆಯಲು ಜಾಗರೂಕನಾಗಿರುವೆನು; ನೀವು ಯಾವಾಗ ನನ್ನ ಬಳಿಗೆ ಬರುವಿರಿ? ನಾನು ನಿರ್ದೋಷ ಹೃದಯದಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.