Psalms 101:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆರೆಯವನ ಕುರಿತು ಗುಟ್ಟಾಗಿ ಚಾಡಿ ಹೇಳುವವನನ್ನು ನಾನು ತಡೆಯುವೆನು. ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ ನಾನು ಅವರಿಗೆ ಅವಕಾಶ ಕೊಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.
Kannada BSI Bible 2016
ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವದಿಲ್ಲ.
Kannada Bible (KNCL) BSI 2016
ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು; ಗರ್ವದ ಕಣ್ಣೂ, ಅಹಂಕಾರದ ಹೃದಯವೂ ಉಳ್ಳವನನ್ನು ಸಹಿಸಲಾರೆನು.