Psalms 102:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನಾನು ಆಪತ್ತುಗಳಲ್ಲಿರುವಾಗ ನನಗೆ ವಿಮುಖನಾಗಬೇಡ, ನನಗೆ ಕಿವಿಗೊಡು. ಸಹಾಯಕ್ಕಾಗಿ ಮೊರೆಯಿಡುವಾಗ ಬೇಗನೆ ಸದುತ್ತರವನ್ನು ದಯಪಾಲಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕಷ್ಟದಲ್ಲಿ ವಿಮುಖನಾಗಬೇಡ; ನನ್ನ ಮೊರೆಗೆ ಕಿವಿಗೊಡು; ನಾನು ಕೂಗಿಕೊಳ್ಳುವ ದಿನದಲ್ಲಿ ಬೇಗನೆ ಸದುತ್ತರವನ್ನು ದಯಪಾಲಿಸು.
Kannada BSI Bible 2016
ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕಷ್ಟದಲ್ಲಿ ವಿಮುಖನಾಗಬೇಡ; ನನ್ನ ಮೊರೆಗೆ ಕಿವಿಗೊಡು; ನಾನು ಕೂಗಿಕೊಳ್ಳುವ ದಿನದಲ್ಲೇ ಬೇಗನೆ ಸದುತ್ತರವನ್ನು ದಯಪಾಲಿಸು.
Kannada Bible (KNCL) BSI 2016
ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ, ಸಹಾಯಮಾಡಿರಿ; ನಾನು ಕರೆಯುವಾಗ ನನ್ನ ಕಡೆಗೆ ತಿರುಗಿರಿ, ಬೇಗನೇ ನನಗೆ ಉತ್ತರಕೊಡಿರಿ.