Psalms 102:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೋಕವೂ ಆಕಾಶವೂ ಕೊನೆಗೊಳುತ್ತವೆ. ನೀನಾದರೊ ಶಾಶ್ವತವಾಗಿರುವೆ! ಅವು ಬಟ್ಟೆಗಳಂತೆ ಹಳೆಯದಾಗುತ್ತವೆ. ನೀನು ಅವುಗಳನ್ನು ಉಡುಪುಗಳಂತೆ ಬದಲಾಯಿಸುವೆ. ಅವುಗಳೆಲ್ಲಾ ಬದಲಾಗುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು.
Kannada BSI Bible 2016
ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತೀ; ಅವು ಮಾರ್ಪಡುವವು.
Kannada Bible (KNCL) BSI 2016
ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ನಾಶವಾಗುವುವು; ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ. ಅವುಗಳೆಲ್ಲಾ ವಸ್ತ್ರದ ಹಾಗೆ ಹಳೆಯದಾಗುವುದು; ಅಂಗಿಯ ಹಾಗೆ ಅವುಗಳನ್ನು ಬದಲಾಯಿಸುವಿರಿ; ಅವು ತೆಗೆದುಹಾಕಲಾಗುವುದು.