Psalms 103:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನ ಭಕ್ತರನ್ನು ಕನಿಕರಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
Kannada BSI Bible 2016
ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
Kannada Bible (KNCL) BSI 2016
ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ I ಕನಿಕರಿಸುವನಾತ ತನಗೆ ಅಂಜುವವರಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ, ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ.