Psalms 103:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಅಡವಿಯ ಚಿಕ್ಕ ಹೂವಿನಂತಿದ್ದೇವೆ ಎಂಬುದು ಆತನಿಗೆ ಗೊತ್ತಿದೆ. ನಮ್ಮ ಹೂವು ಬೇಗನೆ ಬೆಳೆದರೂ ಬಿಸಿಗಾಳಿ ಬೀಸಿದಾಗ ಒಣಗಿಹೋಗುವುದು. ಬಳಿಕ, ಅದು ಬೆಳೆದ ಸ್ಥಳವನ್ನೂ ಗುರುತಿಸಲಾಗದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ.
Kannada BSI Bible 2016
ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಳಿಬಡಿಯುತ್ತಲೇ ಅದು ಹೋಗುವದು; ಅದರ ಸ್ಥಳವು ಅದನ್ನು ತಿರುಗಿ ಕಾಣುವದಿಲ್ಲ.
Kannada Bible (KNCL) BSI 2016
ಬಿದ್ದುಹೋಗುವುದಾ ಹೂವು ಗಾಳಿಯ ಬಡಿತಕ್ಕೆ I ಅದರ ಗುರುತೂ ಇರದಲ್ಲಿ ಮರಳಿ ನೋಡಲಿಕ್ಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾಳಿಯು ಅದರ ಮೇಲೆ ಬೀಸುತ್ತಲೇ ಹೂವು ಇಲ್ಲದೆ ಹೋಗುತ್ತದೆ; ಅದು ಇದ್ದ ಸ್ಥಳವನ್ನು ಪುನಃ ಕಾಣುವುದಿಲ್ಲ.