Psalms 104:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಯೆಹೋವನೇ, ನನ್ನ ದೇವರೇ, ನೀನು ಬಹಳ ದೊಡ್ಡವನು! ನೀನು ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಂಡಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.
Kannada BSI Bible 2016
ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ಕೃಷ್ಟನು; ಪ್ರಭಾವಮಹತ್ವಗಳಿಂದ ಭೂಷಿತನಾಗಿದ್ದೀ.
Kannada Bible (KNCL) BSI 2016
ಭಜಿಸು ನನ್ನ ಮನವೇ, ಭಜಿಸು, ಪ್ರಭುವನು I ಪ್ರಭು, ನನ್ನ ದೇವಾ, ನೀ ಸರ್ವೋತ್ತಮನು I ಮಹಿಮೆ ಪ್ರತಾಪಗಳಿಂದ ಭೂಷಿತನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು. ನನ್ನ ದೇವರಾದ ಯೆಹೋವ ದೇವರೇ, ನೀವು ಬಹಳ ದೊಡ್ಡವರಾಗಿದ್ದೀರಿ; ಘನತೆಯಿಂದಲೂ, ಪ್ರಭಾವದಿಂದಲೂ ಭೂಷಿತನಾಗಿರುವೆ.