Psalms 104:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಜೀವಶ್ವಾಸವನ್ನು ಊದುವಾಗ ಅವು ಸೃಷ್ಟಿಯಾಗುತ್ತವೆ. ನೀನು ಭೂಮಿಯನ್ನು ಮತ್ತೆ ನೂತನ ಪಡಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ. ನೀನು ಭೂಮಿಯನ್ನು ನೂತನಪಡಿಸುತ್ತಿರುತ್ತಿ.
Kannada BSI Bible 2016
ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ. ಭೂವಿುಯನ್ನು ನೂತನಪಡಿಸುತ್ತಿರುತ್ತೀ.
Kannada Bible (KNCL) BSI 2016
ನೀ ಉಸಿರನ್ನೂದಲು ಹೊಸದಾಗುವುವು I ಪುನಶ್ಚೇತನಗೊಳ್ಳುವುದು ಜಗವೆಲ್ಲವು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಮ್ಮ ಶ್ವಾಸವನ್ನು ಕಳುಹಿಸಲು, ಜೀವಜಂತುಗಳು ಹುಟ್ಟುತ್ತವೆ; ಹೀಗೆ ನೀವು ಭೂಮಿಯನ್ನು ನೂತನಗೊಳಿಸುತ್ತೀರಿ.