Psalms 104:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಾಪಾತ್ಮರು ಭೂಮಿಯಿಂದ ಕಾಣದೆಹೋಗಲಿ. ದುಷ್ಟರು ಎಂದೆಂದಿಗೂ ನಿರ್ಮೂಲವಾಗಲಿ. ನನ್ನ ಆತ್ಮವೇ, ಯೆಹೋವನನ್ನು ಸ್ತುತಿಸು! ಯೆಹೋವನನ್ನು ಕೊಂಡಾಡು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯೆಹೋವನಿಗೆ ಸ್ತೋತ್ರ.
Kannada BSI Bible 2016
ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾಪಾತ್ಮರು ಭೂಲೋಕದಲ್ಲಿ ಮುಗಿದು ಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯಾಹುವಿಗೆ ಸ್ತೋತ್ರ.
Kannada Bible (KNCL) BSI 2016
ದಹಿಸಿಹೋಗಲಿ ಧರೆಯಿಂದ ದುಷ್ಟರು I ನಿರ್ಮೂಲವಾಗಲಿ ಸಕಲ ದುರುಳರು I ಪ್ರಭುವನು ನನ್ನ ಮನ ಸ್ತುತಿಸಲಿ I ಪ್ರಭುವಿಗೆ ಸ್ತುತಿಸ್ತೋತ್ರವಾಗಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಾಪಿಗಳು ಭೂಮಿಯೊಳಗಿಂದ ಮುಗಿದು ಹೋಗಲಿ; ದುಷ್ಟರು ಇಲ್ಲದೆ ಹೋಗಲಿ. ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು. ಯೆಹೋವ ದೇವರಿಗೆ ಸ್ತೋತ್ರವಾಗಲಿ.