Psalms 106:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ತನ್ನ ಜನರನ್ನು ಅನೇಕ ಸಲ ರಕ್ಷಿಸಿದರೂ ಅವರು ಆತನಿಗೆ ವಿರೋಧವಾಗಿ ತಿರುಗಿ ತಮ್ಮ ಇಷ್ಟಾನುಸಾರವಾಗಿ ಮಾಡಿದರು. ಅವರು ಅನೇಕಾನೇಕ ಕೆಟ್ಟಕಾರ್ಯಗಳನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.
Kannada BSI Bible 2016
ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ ಅವರು ತಮ್ಮ ಆಲೋಚನೆಯನ್ನು ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.
Kannada Bible (KNCL) BSI 2016
ಪ್ರಭು ಪದೇಪದೇ ವಿಮುಕ್ತಗೊಳಿಸಿದನಾದರೂ I ಪರ್ಯಾಲೋಚಿಸದೆ ಪ್ರತಿಭಟನೆ ಮಾಡಿದರವರು I ಈ ಪರಿಯ ಅಕ್ರಮದ ನಿಮಿತ್ತ ಅವನತಿಗಿಳಿದರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕ ಸಾರಿ ದೇವರು ಇಸ್ರಾಯೇಲರನ್ನು ಬಿಡಿಸಿದರು, ಆದರೆ ಅವರು ತಿರುಗಿಬೀಳುತ್ತಲೇ ಇದ್ದರು; ತಮ್ಮ ಅಕ್ರಮದಿಂದಲೇ ಅವರು ಕುಗ್ಗಿಹೋದರು;