Psalms 106:47 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ದೇವರಾದ ಯೆಹೋವನು ನಮ್ಮನ್ನು ರಕ್ಷಿಸಿದನು! ಅನ್ಯಜನಾಂಗಗಳಿಂದ ನಮ್ಮನ್ನು ಬಿಡಿಸಿಕೊಂಡು ಬಂದನು. ಆಗ ನಾವು ಆತನ ಪವಿತ್ರ ಹೆಸರನ್ನು ಕೊಂಡಾಡುವುದಕ್ಕೂ ಆತನನ್ನು ಸಂಕೀರ್ತಿಸುವುದಕ್ಕೂ ಸಾಧ್ಯವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.
Kannada BSI Bible 2016
ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್‌ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.
Kannada Bible (KNCL) BSI 2016
ಹೇ ಪ್ರಭು, ನಮ್ಮ ದೇವಾ, ನಮ್ಮನ್ನುದ್ಧರಿಸು I ನಾಡುನಾಡುಗಳಿಂದ ನಮ್ಮನೊಂದುಗೂಡಿಸು I ನಿನ್ನ ಪವಿತ್ರ ನಾಮವನು ನಾವು ಭಜಿಸುವೆವು I ನಿನ್ನ ಸ್ತುತಿ ಸ್ತೋತ್ರಗಳಲಿ ಹೆಚ್ಚಳ ಪಡುವೆವು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ದೇವರಾದ ಯೆಹೋವ ದೇವರೇ, ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, ನಮ್ಮನ್ನು ರಕ್ಷಿಸಿರಿ.