Psalms 106:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನು ಯಾವಾಗಲೂ ಇದ್ದವನೂ ಎಂದೆಂದಿಗೂ ಇರುವಾತನೂ ಆಗಿದ್ದಾನೆ. “ಆಮೆನ್! ಯೆಹೋವನಿಗೆ ಸ್ತೋತ್ರವಾಗಲಿ!” ಎಂದು ಜನರೆಲ್ಲರೂ ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ದೇವರಾದ ಯೆಹೋವನಿಗೆ, ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ “ಆಮೆನ್” ಎನ್ನಲಿ. ಯೆಹೋವನಿಗೆ ಸ್ತೋತ್ರ!
Kannada BSI Bible 2016
ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್‌ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್‍ದೇವನಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ ಆಮೆನ್ ಎನ್ನಲಿ. ಯಾಹುವಿಗೆ ಸ್ತೋತ್ರ!
Kannada Bible (KNCL) BSI 2016
ಇಸ್ರಯೇಲಿನ ದೇವನಾದ ಪ್ರಭುವಿಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್’, ಪ್ರಭುವಿಗೆ ಸ್ತೋತ್ರ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲರೂ, “ಆಮೆನ್!” ಎಂದು ಹೇಳಲಿ. ನೀವು ಯೆಹೋವ ದೇವರನ್ನು ಸ್ತುತಿಸಿರಿ.