Psalms 106:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ. ನಿನ್ನ ಜನರೊಂದಿಗೆ ನಾನೂ ಸಂತೋಷಪಡುವಂತೆ ಮಾಡು. ನಿನ್ನ ಜನರೊಂದಿಗೆ ನಾನೂ ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ, ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.
Kannada BSI Bible 2016
ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.
Kannada Bible (KNCL) BSI 2016
ನೀನಾರಿಸಿಕೊಂಡಿರುವ ಪ್ರಗತಿಯನು ನಾ ಕಾಣಮಾಡು I ನಿನ್ನ ಜನಾಂಗದವರ ಸಂತಸವನು ನಾ ಸವಿಯಮಾಡು I ನಿನ್ನ ಸ್ವಕೀಯರ ಮಹಿಮೆಯಲ್ಲೆನಗೆ ಪಾಲನ್ನು ನೀಡು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಾನು ನೀವು ಆಯ್ದುಕೊಂಡವರ ಸುಖವನ್ನು ಕಂಡು, ನಿಮ್ಮ ಜನರ ಸಂತೋಷದೊಂದಿಗೆ ಸಂತೋಷಿಸಿ, ನಿಮ್ಮ ಸ್ವಕೀಯರ ಸಂಗಡ ಹೊಗಳಿಕೊಳ್ಳುವೆನು.