Psalms 106:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಈಜಿಪ್ಟಿನಲ್ಲಿ ಮಾಡಿದ ಮಹತ್ಕಾರ್ಯಗಳಿಂದ ನಮ್ಮ ಪೂರ್ವಿಕರು ಏನೂ ಕಲಿತುಕೊಳ್ಳಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ತಿರುಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.
Kannada BSI Bible 2016
ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.
Kannada Bible (KNCL) BSI 2016
ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನು ಈಜಿಪ್ಟಿನಲಿ I ಸ್ಮರಿಸಲಿಲ್ಲವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ I ಬದಲಿಗೆ ಮಹೋನ್ನತನನೆ ಪ್ರತಿಭಟಿಸಿದರು ಕೆಂಗಡಲಬಳಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.