Psalms 106:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಆಜ್ಞಾಪಿಸಲು ಕೆಂಪು ಸಮುದ್ರವು ಒಣಗಿಹೋಯಿತು. ಆತನು ಆಳವಾದ ಸಮುದ್ರವನ್ನು ಇಬ್ಭಾಗ ಮಾಡಿ ಮರಳುಗಾಡಿನಂತೆ ಒಣಗಿಹೋಗಿದ್ದ ಭೂಮಿಯ ಮೇಲೆ ನಮ್ಮ ಪೂರ್ವಿಕರನ್ನು ನಡೆಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.
Kannada BSI Bible 2016
ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಗದರಿಸಲು ಕೆಂಪು ಸಮುದ್ರವು ಒಣಗಿ ಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.
Kannada Bible (KNCL) BSI 2016
ಒಣಗಿಹೋಯಿತಾ ಕೆಂಗಡಲು ಆತನ ಗದರಿಕೆಗೆ I ದಾಟಿಸಿದನಾ ಸಾಗರವನು ಅಡವಿಯೋ ಎಂಬ ಹಾಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಕೆಂಪು ಸಮುದ್ರವನ್ನು ಗದರಿಸಲು, ಅದು ಒಣಗಿ ಹೋಯಿತು; ಹೀಗೆ ಮರುಭೂಮಿಯಲ್ಲಿ ನಡೆದು ಹೋದಂತೆ ಜಲಾಗಾಧದಲ್ಲಿ ಇಸ್ರಾಯೇಲರನ್ನು ನಡೆಸಿದರು.