Psalms 107:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಆತನು ದೀನರನ್ನು ಅವರ ಸಂಕಟದಿಂದ ಬಿಡಿಸಿದನು. ಈಗ ಅವರ ಕುಟುಂಬಗಳು ಕುರಿಮಂದೆಗಳಂತೆ ದೊಡ್ಡದಾದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ, ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು.
Kannada BSI Bible 2016
ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೇರಿಸಿ ಕುರಿಹಿಂಡಿನಂತೆ ಹೆಚ್ಚಿಸಿದನು.
Kannada Bible (KNCL) BSI 2016
ದೀನರನ್ನೇರಿಸಿದನು ಅವನತಿಯಿಂದ ಉನ್ನತಿಗೆ I ಹೆಚ್ಚಿಸಿದನವರ ಸಂತತಿಯನು ಕುರಿಮಂದೆ ಹಾಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ದೇವರು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ, ಅವನ ಕುಟುಂಬಗಳನ್ನು ಮಂದೆಯ ಹಾಗೆ ಮಾಡಿದರು.