Psalms 108:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ತನ್ನ ಆಲಯದೊಳಗಿಂದ ಹೀಗೆಂದನು: “ನಾನು ಯುದ್ಧದಲ್ಲಿ ಗೆದ್ದು ಜಯಘೋಷ ಮಾಡುವೆನು; ಶೆಕೆಮ್ ಪ್ರದೇಶವನ್ನೂ ಸುಕ್ಕೋತ್ ಬಯಲನ್ನೂ ನನ್ನ ಜನರಿಗೆ ಕೊಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳತೆಮಾಡಿ ಕೊಡುವೆನು.
Kannada BSI Bible 2016
ದೇವರು ತನ್ನ ಪರಿಶುದ್ಧತ್ವದಲ್ಲಿ ನುಡಿದಿದ್ದಾನೆ; ನಾನು ಉತ್ಸಾಹ ಪಡುವೆನು. ಶೆಕೆಮನ್ನು ಹಂಚುವೆನು, ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬೈಲನ್ನು ಅಳೆದುಕೊಡುವೆನು.
Kannada Bible (KNCL) BSI 2016
ಗರ್ಭಗುಡಿಯಿಂದಲೆ ದೇವನಿಂತೆಂದನು: I “ಜಯಶೀಲ ನಾನು, ಹಂಚುವೆನು ಶೆಖೆಮನು I ಅಳೆದುಕೊಡುವೆನು ಸುಖೋತೆಂಬ ಬಯಲನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.